ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬಾಲಿವುಡ್ ಚಿತ್ರಗಳಲ್ಲಿನ ದುರಂತ ಕಥೆಗಳ ನಾಯಕನೆಂದೇ ಗುರುತಿಸಲ್ಪಟ್ಟಿದ್ದ ನಟ ದಿಲೀಪ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ದಿಲೀಪ್ ಕುಮಾರ್ ಅವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಿಲೀಪ್ ಕುಮಾರ್ ಅವರಿಗೆ 94ವರ್ಷ ವಯಸ್ಸಾಗಿದ್ದು, ನಿರ್ಜಲೀಕರಣದಿಂದ ಆರೋಗ್ಯ ಹದಗೆಟ್ಟಿದೆ ಎನ್ನಲಾಗುತ್ತಿದೆ. ಆಸ್ಪತ್ರೆಯಲ್ಲಿ ಹಲವು ಚಿಕಿತ್ಸೆಗಳನ್ನು ನಡೆಸಲಾಗಿದೆ. ಕಳೆದ ಹಲವು ವರ್ಷಗಳಿಂಧ ದಿಲಿಪ್ ಕುಮಾರ್ ಅವರ ಆರೋಗ್ಯ ಸ್ಥಿರವಾಗಿರಲಿಲ್ಲ. ಕಳೆದ ವರ್ಷವೂ ಡಿಸೆಂಬರ್ ನಲ್ಲಿ ಜ್ವರದಿಂದಾಗಿ ಆರೋಗ್ಯ ಹದಗೆಟ್ಟಿತ್ತು. ಆರೋಗ್ಯ ಸುಧಾರಿಸಿದ ಬಳಿಕ ಟ್ವೀಟರ್ ನಲ್ಲಿ ಆರೋಗ್ಯದ ಕುರಿತು ತಿಳಿಸಿದ್ದರು. ಇದೀಗ ಮತ್ತೆ ಆರೋಗ್ಯ ಹದಗೆಟ್ಟಿದ್ದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

-Ad-

Leave Your Comments