ಜಗ್ಗೇಶ್ ವಿವಾದಾದ್ಮಕ ಟ್ವೀಟ್, ಆಮೇಲೆ ಡಿಲೀಟ್

ವೆಂಕಯ್ಯನಾಯ್ಡು ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನಟ ಜಗ್ಗೇಶ್ ಟ್ವೀಟ್ ಮಾಡಿದ್ದು, ವೆಂಕಯ್ಯ ನಾಯ್ಡು ಅವರನ್ನು ಟೀಕಿಸಿದವರಿಗೆ ‘ಬಾರದು ಒಪ್ಪುದು, ಬಪ್ಪುದು ತಪ್ಪದು ಇದೇ ದೇವರ ಲೀಲೆ’ ಎಂದು ಹೇಳುವ ಮೂಲಕ ಟಾಂಗ್ ಕೊಟ್ಟಿದ್ದಾರೆ.

ವೆಂಕಯ್ಯ ನಾಯ್ಡು ಅವರು ಕಳೆದ ಬಾರಿಯ ರಾಜ್ಯಸಭೆಯಲ್ಲಿ ಕರ್ನಾಟಕದಿಂದ ಆಯ್ಕೆಯಾಗಲು ಬಯಸಿದ್ದರು. ಆದರೆ ಭಾಷಾ ಭಾವನೆಯ ಹಿನ್ನೆಲೆಯಲ್ಲಿ ಅವರನ್ನು ರಾಜ್ಯದಿಂದ ಆಯ್ಕೆಯಾಗುವ ವಿಷಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಜನರ ವಿರೋಧಕ್ಕೆ ಮಣಿದ ಬಿಜೆಪಿ ನಂತರ ಕರ್ನಾಟಕದಿಂದ ರಾಜ್ಯಸಭೆಗೆ ವೆಂಕಯ್ಯ ನಾಯ್ಡು ಅವರ ಬದಲಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಟಿಕೆಟ್ ನೀಡಲಾಯಿತು.

ಇಂದು ವೆಂಕಯ್ಯ ಅವರು ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಮೇಲೆ ಈ ರೀತಿಯಾದ ಟ್ವೀಟ್ ಮಾಡಿದ್ದಾರೆ. ಜಗ್ಗೇಶ್ ಅವರ ಟ್ವೀಟ್ ಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ವ್ಯಾಪಕ ಆಕ್ಷೇಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ನಂತರ ಅದನ್ನು ಡಿಲೀಟ್ ಮಾಡಲಾಗಿದೆ.

-Ad-

Leave Your Comments