ಆಗಸ್ಟ್ 25ಕ್ಕೆ ತೆರೆ ಮೇಲೆ ಮುಗುಳುನಗೆ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಮುಗುಳುನಗೆ’ ಚಿತ್ರ ಆಗಸ್ಟ್ 25 ರಂದು  ಬಿಡುಗಡೆಯಾಗಲಿದೆ.  ‘ಗಾಳಿಪಟ’ ಚಿತ್ರದ ನಂತರ ಯೋಗರಾಜ್ ಭಟ್ ಹಾಗೂ ಗಣೇಶ್ ಒಂದಾಗಿರುವುದು ಈ ಚಿತ್ರದ ಮೇಲೆ ಮತ್ತಷ್ಟು ನಿರೀಕ್ಷೆ ಹೆಚ್ಚಾಗುವಂತೆ ಮಾಡಿದೆ.

ಗಣೇಶ್ ಜೋಡಿಯಾಗಿ ಚಿತ್ರದಲ್ಲಿ ಒಟ್ಟು ನಾಲ್ಕು ನಾಯಕಿಯರಿದ್ದಾರೆ. ‘ಸಿದ್ಧಾರ್ಥ್’ ಖ್ಯಾತಿಯ ಅಪೂರ್ವ ಆರೋರ, ಆಶಿಕಾ ರಂಗನಾಥ್, ನಿಖಿತಾ ನಾರಾಯಣ್ ಮತ್ತು ವಿಶೇಷ ಪಾತ್ರದಲ್ಲಿ ನಟಿ ಅಮೂಲ್ಯ ಕಾಣಿಸಿಕೊಂಡಿದ್ದಾರೆ. ‘ಮುಗುಳುನಗೆ’ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಇನ್ನುಳಿದಂತೆ ಚಿತ್ರಕ್ಕೆ ಯೋಗರಾಜ್ ಭಟ್ ನಿರ್ದೇಶನವಿದ್ದು, ಸೈಯದ್ ಸಲಾಂ  ಚಿತ್ರ ನಿರ್ಮಾಣ ಮಾಡಿದ್ದಾರೆ

-Ad-

Leave Your Comments